Udyogatana
ಉದ್ಯೋಗ

627 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | PUC, SSLC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

ಸವಿತಾ ಎಂ.,20 Oct 2025, 06:49 pm IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

627 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | PUC, SSLC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

Anganwadi Recruitment 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (The Government Of Karnataka Women and Child Development) ರಾಜ್ಯದ ವಿವಿಧ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು ಮೂರು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು; ಆ ಜಿಲ್ಲೆಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿ ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ತಹಶೀಲ್ದಾರ್ ಹುದ್ದೆ ಪಡೆಯುವುದು ಹೇಗೆ? | ತಹಸೀಲ್ದಾರ್ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ...

ವಿದ್ಯಾರ್ಹತೆ ಏನಿರಬೇಕು?

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಒಳಪಡಿಸುವ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ, ವೇತನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ಗೌರವ ಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು dwcd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಸೀಲ್ದಾರ್, ಉಪ ತಹಸೀಲ್ದಾರ್‌ರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಿಬೇಕು.

ಇದನ್ನೂ ಓದಿ: ಕೆಕೆಆರ್‌ಟಿಸಿ ಕಂಡಕ್ಟರ್ ನೇಮಕಾತಿ: ಪಿಯುಸಿ ಪಾಸಾದವರಿಗೆ ಅವಕಾಶ | ಸಂಪೂರ್ಣ ವಿವರ ಇಲ್ಲಿದೆ...

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹುದ್ದೆಗಳು?

ಈಗಾಗಲೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಗಿದಿದ್ದು; ಇದೀಗ ಚಿಕ್ಕಮಗಳೂರು, ಕೊಡಗು, ಹಾವೇರಿ ಜಿಲ್ಲೆಗಳ ವಿವಿಧ ತಾಲ್ಲೂಕಿನ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಕೊಡಗು : 332

  • ಚಿಕ್ಕಮಗಳೂರು : 267

  • ಹಾವೇರಿ (ಶಿಗ್ಗಾವಿ) : 30

  • ಒಟ್ಟು ಹುದ್ದೆಗಳು : 627

ಕೊಡಗು ಜಿಲ್ಲೆ ಹುದ್ದೆಗಳ ವಿವರ

ಕೊಡಗು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಒಟ್ಟು 332 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-11-2025

ಚಿಕ್ಕಮಗಳೂರು ಜಿಲ್ಲೆ ಹುದ್ದೆಗಳ ವಿವರ

ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಒಟ್ಟು 267 ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-11-2025

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ | ಪದವೀಧರರಿಗೆ ಮ್ಯಾನೇಜರ್ ಹುದ್ದೆಗಳು

ಹಾವೇರಿ ಜಿಲ್ಲೆ ಹುದ್ದೆಗಳ ವಿವರ

ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಶಿಗ್ಗಾವಿ ತಾಲ್ಲೂಕಿನ ವ್ಯಾಪ್ತಿಯ 30 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ಶಿಗ್ಗಾವಿ ತಾಲೂಕು ವ್ಯಾಪ್ತಿಯ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-11-2025

ಮಾರ್ಗಸೂಚಿಗಳು

Downlaod

ಅರ್ಜಿ ಲಿಂಕ್

Apply Now

ಅಧಿಕೃತ ಜಾಲತಾಣ

dwcd.karnataka.gov.in

ಸವಿತಾ ಎಂ.,

ಸುದ್ದಿ ವರದಿಗಾರ

ನಮ್ಮ ಸಮುದಾಯಕ್ಕೆ ಸೇರಿ

ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ

#ಅಂಗನವಾಡಿನೇಮಕಾತಿ#ಅಂಗನವಾಡಿಹುದ್ದೆ#ಸರ್ಕಾರಿಉದ್ಯೋಗ#Wಅಆಕರ್ನಾಟಕ#ಅಂಗನವಾಡಿಕಾರ್ಯಕರ್ತೆ#ಅಂಗನವಾಡಿಸಹಾಯಕಿ#ಕರ್ನಾಟಕಉದ್ಯೋಗ2025#AnganwadiRecruitment2025#WCDKarnatakaJobs#AnganwadiWorkerJobs#AnganwadiHelperJobs#KarnatakaGovtJobs#WomenDevelopment#ChildDevelopment#KarnatakaRecruitment
ಹೆಚ್ಚಿನದನ್ನು ಲೋಡ್ ಮಾಡಲಾಗುತ್ತಿದೆ...