Udyogatana
ಉದ್ಯೋಗ

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳು

ಮಾಲತೇಶ್ ಮಾಳಮ್ಮನವರ್12 Oct 2025, 12:08 pm IST

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೋಸ್ಟ್ ಪೇಮೆಂಟ್ ಬ್ಯಾಂಕ್’ನಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪೂರ್ಣ ಮಾಹಿತಿ ಇಲ್ಲಿದೆ...

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳು

India Post Payments Bank GDS Recruitment 2025: ಕೇಂದ್ರದ ಸಂವಹನ ಸಚಿವಾಲಯ ಮತ್ತು ಭಾರತೀಯ ಅಂಚೆ ಇಲಾಖೆಯ ಅಧೀನದಲ್ಲಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಲಿಮಿಟೆಡ್’ನಲ್ಲಿ 308 ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೇಶದಾದ್ಯಂತ 22 ರಾಜ್ಯಗಳಲ್ಲಿ ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು; ಕರ್ನಾಟಕದಲ್ಲಿ 19 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಆಸಕ್ತರು ಇದೇ ಅಕ್ಟೋಬರ್ 29ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ರಾಜ್ಯದ ಈ ಜಿಲ್ಲೆಗಳಲ್ಲಿ ಅವಕಾಶ

ರಾಜ್ಯದಲ್ಲಿ ದೊಡ್ಡಬಳ್ಳಾಪುರ, ಬೆಂಗಳೂರು, ಅಂಕೋಲಾ, ಬೀದರ್, ಚಿಕ್ಕೋಡಿ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಮಂಗಳೂರು, ಶಿವಮೊಗ್ಗ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: ಹಳ್ಳಿಗರ ಆಪ್ತಮಿತ್ರ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ | ನಿಮ್ಮ ಮನೆ ಬಾಗಿಲಿಗೆ ನಿಮ್ಮ ಬ್ಯಾಂಕ್

ವಿದ್ಯಾರ್ಹತೆ, ವಯೋಮಿತಿ, ವೇತನ

ಮಾನ್ಯತೆ ಪಡೆದ ಕಾಲೇಜಿನಿಂದ ಕಲೆ, ವಾಣಿಜ್ಯ, ವಿಜ್ಞಾನ ಸೇರಿದಂತೆ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕನಿಷ್ಠ 20 ರಿಂದ 35 ವರ್ಷದೊಳಗಿನವರಿಗೆ ಅವಕಾಶ. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಕೆ ಇದೆ. ಯಾವುದೇ ಅನುಭವದ ಅವಶ್ಯಕತೆಯಿಲ್ಲ. ಮಾಸಿಕವಾಗಿ 30,000 ರೂ. ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿಯನ್ನು ಎಲ್ಲಾ ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕದೊಂದಿಗೆ ippbonline.com ಆನ್‌ಲೈನ್ ಮೂಲಕ ಕಳುಹಿಸಬೇಕು. ಮೆರಿಟ್ ಆಧಾರದ ಮೇಲೆ ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ಪದವಿ ಹಂತದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನ: 29-10-2025

Related image

ಅಧಿಸೂಚನೆ

Download

ಅರ್ಜಿ ಲಿಂಕ್

Apply Now

ಮಾಲತೇಶ್ ಮಾಳಮ್ಮನವರ್

ಸುದ್ದಿ ವರದಿಗಾರ

ನಮ್ಮ ಸಮುದಾಯಕ್ಕೆ ಸೇರಿ

ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ

#IndiaPostPaymentsBank#IPPBRecruitment2025#IndiaPostJobs#BankJobs2025#KarnatakaJobs#IPPBExecutivePosts#JobsInIndia#ಗ್ರಾಮೀಣಡಾಕ್‌ಸೇವಕ್#ಅಂಚೆಬ್ಯಾಂಕ್‌ಹುದ್ದೆಗಳು
ಹೆಚ್ಚಿನದನ್ನು ಲೋಡ್ ಮಾಡಲಾಗುತ್ತಿದೆ...