Udyogatana
ಉದ್ಯೋಗ

ಕೊಪ್ಪಳ ಜಿಲ್ಲಾ ಆಸ್ಪತ್ರೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ನರ್ಸ್ ಸೇರಿ ವಿವಿಧ ಹುದ್ದೆಗಳ ನೇಮಕ

ಸವಿತಾ ಎಂ.,8 Nov 2025, 01:17 pm IST

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ನರ್ಸ್ ಹುದ್ದೆಗಳು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ...

ಕೊಪ್ಪಳ ಜಿಲ್ಲಾ ಆಸ್ಪತ್ರೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ನರ್ಸ್ ಸೇರಿ ವಿವಿಧ ಹುದ್ದೆಗಳ ನೇಮಕ

Koppal District Hospital Nurse Recruitment 2025: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದ ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಕೊಪ್ಪಳ ಜಿಲ್ಲೆಯ ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳಲಾಗುತ್ತಿದೆ. ಖಾಲಿ ಹುದ್ದೆಗಳ ವಿವರ ಹೀಗಿದೆ:

ನರ್ಸ್

12 ಹುದ್ದೆಗಳು

ಕಿರಿಯ ಪ್ರಯೋಗ ಶಾಲಾ ತಂತ್ರಜ್ಞ

01 ಹುದ್ದೆಗಳು

ಫಾರ್ಮಸಿಸ್ಟ್

01 ಹುದ್ದೆಗಳು

ಒಟ್ಟು

14 ಹುದ್ದೆಗಳು

ವಿದ್ಯಾರ್ಹತೆ ವಿವರ

ಖಾಲಿ ಇರುವ 14 ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್‌ಸಿ, ಜಿಎನ್‌ಎಂ ನರ್ಸಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು ಅಥವಾ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಿಂದ ತೇರ್ಗಡೆ ಹೊಂದಿದ್ದು ಅರೆವೈದ್ಯಕೀಯ ಮಂಡಳಿಯಲ್ಲಿ ಪ್ರಯೋಗಾಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು.

ಇನ್ನು ಫಾರ್ಮಸಿಸ್ಟ್ ಹುದ್ದೆಗೆ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿಯನ್ನು ಹೊಂದಿರುವ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮಾಸಿಕ ವೇತನವೆಷ್ಟು?

ಮೇಲ್ಕಾಣಿಸಿದ ಎಲ್ಲಾ ಹುದ್ದೆಗಳು ಗುತ್ತಿಗೆ ಆಧಾರದಲ್ಲಿ ನೇಮಕ ನಡೆಯಲಿದ್ದು; ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ತಿಂಗಳು 16,067 ರೂ. ವೇತನದ ಜೊತೆಗೆ ಇತರ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ರೋಸ್ಟರ್ ಕಂ ಮೆರಿಟ್ ಪದ್ದತಿಯನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಸಂಬಂಧಿಸಿದಂತೆ 2 ವರ್ಷದ ಅನುಭವ ಹೊಂದಿರಬೇಕು. ಕನಿಷ್ಠ 18 ರಿಂದ 45 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳಿಗೆ ಅವಕಾಶ.

ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ದಾಖಲಾತಿಯ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಯುಳ್ಳ ಅಧಿಸೂಚನೆಯನ್ನು ಕೆಳಗೆ ನೀಡಲಾಗಿದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ...

ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 20-11-2025

ಅಧಿಸೂಚನೆ: Download

ಅಧಿಕೃತ ವೆಬ್‌ಸೈಟ್: koppal.nic.in

ಸವಿತಾ ಎಂ.,

ಸುದ್ದಿ ವರದಿಗಾರ

ನಮ್ಮ ಸಮುದಾಯಕ್ಕೆ ಸೇರಿ

ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ

#ಕೊಪ್ಪಳನೇಮಕಾತಿ#ನರ್ಸುಹುದ್ದೆ2025#ಆರೋಗ್ಯವಿಭಾಗಹುದ್ದೆ#ಸರ್ಕಾರೀಉದ್ಯೋಗ#ಕೊಪ್ಪಳಜಿಲ್ಲಾಆರೋಗ್ಯವಿಭಾಗ#KoppalHospitalJobs#KoppalRecruitment2025#NurseVacancy#HealthDepartmentJobs#GovernmentJobsKarnataka#KoppalDistrictRecruitment#NursingJobsIndia
ಹೆಚ್ಚಿನದನ್ನು ಲೋಡ್ ಮಾಡಲಾಗುತ್ತಿದೆ...