ವಿದ್ಯಾರ್ಥಿನಿಯರಿಗೆ ಕೋಟಕ್ ಕನ್ಯಾ ಸ್ಕಾಲರ್‌ಶಿಪ್ | ವರ್ಷಕ್ಕೆ 1.5 ಲಕ್ಷ ರೂ ಆರ್ಥಿಕ ನೆರವು
2025-26ನೇ ಸಾಲಿನ ‘ಕೋಟಕ್ ಕನ್ಯಾ ಸ್ಕಾಲರ್‌ಶಿಪ್’ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ...

Kotak Kanya Scholarship 2025: ಕೋಟಕ್ ಶಿಕ್ಷಣ ಪ್ರತಿಷ್ಠಾನವು 2025-26ರ ‘ಕೋಟಕ್ ಕನ್ಯಾ ಸ್ಕಾಲರ್‌ಶಿಪ್’ಗಾಗಿ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ಅಧ್ಯಯನ ಮುಂದುವರಿಸಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ಸಿಗಲಿದೆ.
ಸದರಿ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದ ಸಿಎಸ್‌ಆರ್ ಯೋಜನೆಯಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನ ಸಹಾಯ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ | ಪದವೀಧರರಿಗೆ ಮ್ಯಾನೇಜರ್ ಹುದ್ದೆಗಳು
ವಿದ್ಯಾರ್ಥಿವೇತನದ ಮೊತ್ತವೆಷ್ಟು?
ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೂ ಅವರ ವೃತ್ತಿಪರ ಪದವಿ ಕೋರ್ಸ್/ಪದವಿ ಪೂರ್ಣಗೊಳ್ಳುವ ವರೆಗೆ ವರ್ಷಕ್ಕೆ 1.5 ಲಕ್ಷ ರೂ. ಮೊತ್ತವನ್ನು ನೀಡಲಾಗುತ್ತದೆ.
ಈ ವಿದ್ಯಾರ್ಥಿವೇತನದ ಹಣವನ್ನು ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ, ಇಂಟರ್ನೆಟ್, ಸಾರಿಗೆ, ಲ್ಯಾಪ್‌ಟಾಪ್‌ಗಳು, ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು ಸೇರಿದಂತೆ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಬಳಸಿಕೊಳ್ಳಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ.75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಅಥವಾ ಸಮಾನವಾದ CGPA ಅನ್ನು ಗಳಿಸಿದ ದೇಶದ ಪ್ರತಿಯೊಬ್ಬ ವಿದ್ಯಾರ್ಥಿನಿಯರೂ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂ. ಕ್ಕಿಂತ ಕಡಿಮೆ ಇರಬೇಕು.
2025-26ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ನಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪದವಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು, ಎಂಜಿನಿಯರಿಂಗ್, MBBS, ಇಂಟಿಗ್ರೇಟೆಡ್ LLB (5 ವರ್ಷಗಳು), ಇಂಟಿಗ್ರೇಟೆಡ್ BS-MS/BS-Research, ISER, IISC (ಬೆಂಗಳೂರು) ಅಥವಾ ಇತರ ವೃತ್ತಿಪರ ಕೋರ್ಸ್ಗಳಲ್ಲಿ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮಾನ್ಯತೆ ಪಡೆದಿರಬೇಕು.
ಇದನ್ನೂ ಓದಿ: ಪಿಎಫ್ ನಿಯಮ ಸರಳ | ಇನ್ಮುಂದೆ ಗಾರ್ಡಿಯನ್‌ಷಿಪ್ ಸರ್ಟಿಫಿಕೇಟ್ ಬೇಕಿಲ್ಲ
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು
12ನೇ ತರಗತಿ ಅಂಕಪಟ್ಟಿ
ಕುಟುಂಬದ ಆದಾಯ ಪ್ರಮಾಣ ಪತ್ರ
2025-26ನೇ ಶೈಕ್ಷಣಿಕ ವರ್ಷದ ಶುಲ್ಕದ ವಿವರ
ಕಾಲೇಜು ಸೀಟು ಹಂಚಿಕೆ ದಾಖಲೆ
ಕಾಲೇಜು ಪ್ರವೇಶ ಪರೀಕ್ಷೆಯ ಅಂಕಪಟ್ಟಿ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್‌ಬುಕ್
ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ
ಇದನ್ನೂ ಓದಿ: ‘ಗಗನ ಸಖಿ’ ಆಗಲು ಪಿಯುಸಿ ಪಾಸಾದರೆ ಸಾಕು | ಸಂಪೂರ್ಣ ಮಾಹಿತಿ ಇಲ್ಲಿದೆ...
ಹೇಗೆ ಅರ್ಜಿ ಸಲ್ಲಿಸಬೇಕು?
ನಾವು ಈ ಲೇಖನದ ಕೊನೆಯಲ್ಲಿ ನೀಡಿರುವ ಅರ್ಜಿ ಲಿಂಕ್ ಬಳಸಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2025-26’ ಪುಟ ತೆರೆದುಕೊಳ್ಳುತ್ತದೆ.
ಅಲ್ಲಿ ಮುಖಪುಟದಲ್ಲಿ ಕಾಣುವ 'Apply Now' ಬಟನ್ ಕ್ಲಿಕ್ ಮಾಡಿದರೆ ಆನ್‌ಲೈನ್ ಅರ್ಜಿ ನಮೂನೆ ಪುಟಕ್ಕೆ ಹೋಗಲು ನಿಮ್ಮ ನೋಂದಾಯಿತ ಐಡಿ ಬಳಸಿ ಲಾಗಿನ್ ಮಾಡಬೇಕು.
ಒಂದು ವೇಳೆ ನೀವು ನೋಂದಾಯಿಸದಿದ್ದರೆ, ನಿಮ್ಮ ಇಮೇಲ್/ಮೊಬೈಲ್/ಜಿಮೇಲ್ ಖಾತೆಯೊಂದಿಗೆ ನೋಂದಾಯಿಸಿಕೊಳ್ಳಬೇಕು.
ನೋಂದಣಿಯ ನಂತರ ‘ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025-26’ ಅರ್ಜಿ ನಮೂನೆ ಪುಟ ತೆರೆದುಕೊಳ್ಳುತ್ತದೆ.
‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ‘Terms and Conditions’ ಸ್ವೀಕರಿಸಿ ಮತ್ತು ‘Preview’ ಮೇಲೆ ಕ್ಲಿಕ್ ಮಾಡಿ.
ಆಗ ನೀವು ಭರ್ತಿ ಮಾಡಿದ ಎಲ್ಲಾ ವಿವರಗಳು ಕಾಣಿಸುತ್ತವೆ. ಮತ್ತೊಮ್ಮೆ ಸಂಪೂರ್ಣವಾಗಿ ಪರಿಶೀಲಿಸಿ, ಎಲ್ಲ ಮಾಹಿತಿ ಸರಿಯಾಗಿದ್ದರೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit' ಬಟನ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 31-10-2025
ಅರ್ಜಿ ಲಿಂಕ್: Apply Now
ಮಾಲತೇಶ್ ಮಾಳಮ್ಮನವರ್
ಸುದ್ದಿ ವರದಿಗಾರ
ನಮ್ಮ ಸಮುದಾಯಕ್ಕೆ ಸೇರಿ
ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ
