Udyogatana
ಉದ್ಯೋಗ

NABARD Recruitment 2026- ನಬಾರ್ಡ್ ಬ್ಯಾಂಕಿನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ | 70,000 ರೂ. ವೇತನ

ನಾಗರಾಜ್ ಯು ಎಂ., 2 Jan 2026, 09:03 am IST

ನಬಾರ್ಡ್ ಅರ್ಥಾತ್ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ವಿವರಗಳು ಇಲ್ಲಿವೆ...

NABARD Recruitment 2026- ನಬಾರ್ಡ್ ಬ್ಯಾಂಕಿನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ | 70,000 ರೂ. ವೇತನ

NABARD Recruitment 2026: ಕೇಂದ್ರ ಹಣಕಾಸು ಸಚಿವಾಲಯದ ಅಧೀನದ ನಬಾರ್ಡ್ ಬ್ಯಾಂಕ್ (National Bank for Agriculture and Rural Development- NABARD) ದೇಶದ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ವಲಯದ ಉತ್ತೇಜನಕ್ಕೆ ಒತ್ತು ನೀಡುತ್ತಿದೆ. ಪ್ರಸ್ತುತ ದೇಶಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿಯಿರುವ ಯುವ ಪದವಿಧರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ

ಡೇಟಾ ಸೈನ್ಸ್, ಸೈಬರ್ ಸೆಕ್ಯುರಿಟಿ, ಎಕನಾಮಿಕ್ಸ್, ಫೈನಾನ್ಸ್ ಸಾಫ್ಟ್ವೇರ್ ಟೆಕ್ನಿಕ್ಸ್, ಡೆವಲಪ್‌ಮೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ 44 ಹುದ್ದೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳು ಒಂದು ವರ್ಷದ ಗುತ್ತಿಗೆ ಆಧಾರಿತ ಹುದ್ದೆಗಳಾಗಿವೆ. ಮೂರು ವರ್ಷದ ವರೆಗೆ ಅವಧಿ ವಿಸ್ತರಿಸಲು ಅವಕಾಶವಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಸಂಬಂಧಿಸಿದಂತೆ ಒಂದು ವರ್ಷದ ಅನುಭವ ಅಗತ್ಯ, ಅಯಾ ಹುದ್ದೆಗಳ ಅನುಸಾರ ವಿದ್ಯಾರ್ಹತೆಯನ್ನು ಕೇಳಲಾಗಿದೆ.

ನಬಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ರಿಂದ ಗರಿಷ್ಠ 30 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಕೆ ಅನ್ವಯವಾಗಲಿದೆ.

ಅರ್ಜಿ ಶುಲ್ಕ ಮತ್ತು ಅರ್ಜಿ ಪ್ರಕ್ರಿಯೆ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಬಾರ್ಡ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಭರ್ತಿ ಮಾಡಿ ಕಳುಹಿಸಬೇಕು. ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅಗತ್ಯ ದಾಖಲೆಗಳನ್ನು ಸರಿಯಾಗಿ ನೀಡಬೇಕು. ತಪ್ಪಾದ ದಾಖಲೆಗಳ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಅರ್ಜಿ ಸಲ್ಲಿಸಲಯ ಜನವರಿ 12, 2025 ಕೊನೆಯ ದಿನವಾಗಿದ್ದು; ಎಲ್ಲ ವರ್ಗದ ಅಭ್ಯರ್ಥಿಗಳೂ 150 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಸ್ವೀಕೃತ ಅರ್ಜಿಗಳನ್ನು ಆಯ್ಕೆ ಮಂಡಳಿಯು ಪರಿಶೀಲಿಸಿ ಸಂದರ್ಶನಕ್ಕಾಗಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಪ್ರಕ್ರಿಯೆಯು ಅನುಭವ ಹಾಗೂ ಮೆರಿಟ್ ಆಧಾರವಾಗಿರುತ್ತದೆ. ಸಂದರ್ಶನ ಮತ್ತು ಮೆರಿಟ್ ಆಧಾರದ ಮೇಲೆ ಅಂತಿಮ ಹಂತದ ಆಯ್ಕೆ ಪ್ರಕ್ರಿಯೆ ಜರುಗುತ್ತದೆ.

ವೇತನವೆಷ್ಟು?

ನಬಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 70,000 ರೂ. ವೇತನ ನೀಡಲಾಗುತ್ತದೆ. ಜೊತೆಗೆ ವಿವಿಧ ಸವಲತ್ತುಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಲು ಕೊನೆಯ: 12-01-2026

ಅಧಿಸೂಚನೆ

Download

ಅಧಿಕೃತ ವೆಬ್‌ಸೈಟ್

nabard.org

ನಾಗರಾಜ್ ಯು ಎಂ.,

ಸುದ್ದಿ ವರದಿಗಾರ

ನಮ್ಮ ಸಮುದಾಯಕ್ಕೆ ಸೇರಿ

ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ

#ನಬಾರ್ಡ್ ಉದ್ಯೋಗಾವಕಾಶ#ನಬಾರ್ಡ್ ನೇಮಕಾತಿ 2026#ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್#ಕೇಂದ್ರ ಸರ್ಕಾರ ಉದ್ಯೋಗ#NABARD Recruitment 2026#NABARD Graduate Jobs#NABARD Contract Jobs#Finance Jobs in NABARD#Central Government Jobs India
ಹೆಚ್ಚಿನದನ್ನು ಲೋಡ್ ಮಾಡಲಾಗುತ್ತಿದೆ...