Udyogatana
ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಕರ್ನಾಟಕ ಶಾಖೆ 85 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾಗರಾಜ್ ಯು ಎಂ., 6 Nov 2025, 12:57 pm IST

ಕರ್ನಾಟಕ ಶಾಖೆಯ ಪಂಚಾಬ್ ನ್ಯಾಷನಲ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

ಪಂಜಾಬ್ ನ್ಯಾಷನಲ್ ಬ್ಯಾಂಕ್ ಕರ್ನಾಟಕ ಶಾಖೆ 85 ಹುದ್ದೆಗಳಿಗೆ ಅರ್ಜಿ ಆಹ್ವಾನ

Punjab National Bank Karnataka Recruitment 2025: ದೇಶದ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ (PNB) ಒಟ್ಟು 750 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು (Local Bank Officer - LBO) ನೇಮಕ ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ಸೇರಿ ದೇಶದ ಒಟ್ಟು 21 ರಾಜ್ಯಗಳಲ್ಲಿ ಈ ನೇಮಕಾತಿ ನಡೆಯಲಿದೆ. ಈ ಪೈಕಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕರ್ನಾಟಕ ಶಾಖೆಗಳಲ್ಲಿ 85 ಹುದ್ದೆಗಳು ಖಾಲಿ ಇದ್ದು; ಆಸಕ್ತರು ಈ ಸ್ಥಾನಗಳಿಗೆ ಆನ್‌ಲೈನ್ ಮೂಲಕ ನವೆಂಬರ್ 23ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ

ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ಸಲ್ಲಿಸಬಯಸುವವರು ಯಾವುದೇ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಕಾಲೇಜಿನಲ್ಲಿ ಪೂರ್ಣಗೊಳಿಸಿರಬೇಕು. ಆಯಾ ರಾಜ್ಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ಥಳೀಯ ಭಾಷೆಯಲ್ಲಿ ಉತ್ತಮ ಹಿಡಿತವನ್ನು ಹೊಂದಿರಬೇಕು.

ವಯೋಮಿತಿ ಮತ್ತು ಮಾಸಿಕ ವೇತನವೆಷ್ಟು?

ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 ರೂ. ದಿಂದ 85,920 ರೂ.ಗಳ ವರೆಗೆ ವೇತನವನ್ನು ನೀಡಲಾಗುತ್ತದೆ.

ಇನ್ನು ವಯೋಮಿತಿಯು ಕನಿಷ್ಠ 20 ರಿಂದ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದ್ದು; ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ, ಮಾಜಿ ಸೈನಿಕರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಹ ಅಭ್ಯರ್ಥಿಗಳು pnb.bank.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಶೈಕ್ಷಣಿಕ ಮತ್ತು ಇತರ ಅಗತ್ಯ ಮಾಹಿತಿಗಳನ್ನು ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಜತೆಗೆ, ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯು ಇರಲಿದೆ.

ಸ್ಥಳೀಯ ಭಾಷಾ ಮಾಧ್ಯಮದಲ್ಲಿ ಕಲಿತವರಿಗೆ, ಒಂದು ಭಾಷೆಯಾಗಿ ವ್ಯಾಸಂಗ ಮಾಡಿದವರಿಗೆ ಈ ಪರೀಕ್ಷೆಯಿಂದ ವಿನಾಯ್ತಿ ನೀಡಲಾಗುತ್ತದೆ. ನಂತರದಲ್ಲಿ ಸಂದರ್ಶನ ನಡೆಸಲಾಗುತ್ತದೆ. ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಪಟ್ಟಿ ಸಿದ್ಧಪಡಿಸಿ ಅಂತಿಮ ಆಯ್ಕೆ ನಡೆಯಲಿದೆ.

ಪರೀಕ್ಷೆ ನಡೆಯುವ ಸ್ಥಳ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳಿಗೆ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ.

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-11-2025

  • ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 23-11-2025

ಅಧಿಸೂಚನೆ: Download

ಅಧಿಕೃತ ವೆಬ್‌ಸೈಟ್: pnb.bank.in

ನಾಗರಾಜ್ ಯು ಎಂ.,

ಸುದ್ದಿ ವರದಿಗಾರ

ನಮ್ಮ ಸಮುದಾಯಕ್ಕೆ ಸೇರಿ

ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ

#ಪಂಜಾಬನ್ಯಾಷನಲಬ್ಯಾAಕ್#ಪಿಎನ್‌ಬಿನೇಮಕಾತಿ#ಸರ್ಕಾರಿಹುದ್ದೆಗಳು #ಪಿಎನ್‌ಬಿಹುದ್ದೆಗಳು#ಸ್ಥಳೀಯಬ್ಯಾಂಕ್‌ಅಧಿಕಾರಿ#ಉದ್ಯೋಗಮಾಹಿತಿ#ಆನ್‌ಲೈನ್’ಅರ್ಜಿಸಲ್ಲಿಕೆ#PNBRecruitment2025#PunjabNationalBankJobs#BankVacancies#KarnatakaJobs#GovernmentJobs#PNBLocalBankOfficer#BankingCareers#PNBJobs
ಹೆಚ್ಚಿನದನ್ನು ಲೋಡ್ ಮಾಡಲಾಗುತ್ತಿದೆ...